ವಿಶ್ವ ಪರಿಸರ ದಿನಾಚರಣೆ 2019


                                                        Video by Santhosh B S                       
     ದಿನಾಂಕ 15 6 2019 ರಂದು ಸರ್ಕಾರಿ ಪ್ರೌಢಶಾಲೆ ಧರ್ಮಾ‌ಪುರ ಇಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು ವೇದಿಕೆಯನ್ನು ಪರಿಸರದ ಹಿನ್ನೆಲೆಯಲ್ಲಿ ಸಿದ್ಧಪಡಿಸಿ ಗಿಡಗಳಿಂದ ಅಲಂಕರಿಸಲಾಗಿತ್ತು ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಕಮಲಮ್ಮ ರವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು ಅಧ್ಯಕ್ಷರಾದ ಶ್ರೀ ರಾಮು ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶ್ರೀ ಮಲ್ಲಿಕಾರ್ಜುನ ರವರು ಸಮಾರಂಭದ ಅತಿಥಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಂಘದ ಶ್ರೀ ಚೇತನ್ ರವರು ಹಾಗೂ ಸದಸ್ಯರು ಮತ್ತು ಮತ್ತು ಶಾಲೆಯ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿ ಮನರಂಜಿಸಿದರು. ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು, ಈ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಪ್ರಾಣಿ ಪಕ್ಷಿ ಇವುಗಳ ಅಳಿವು-ಉಳಿವು ಹಾಗೂ ಉಪಯೋಗ ದುಷ್ಪರಿಣಾಮದ ಬಗ್ಗೆ ಮಾತನಾಡಿದರು ಎಂಟನೇ ತರಗತಿಯ ವಿದ್ಯಾರ್ಥಿ ಲಕ್ಷ್ಮಿ ನಾನು ಸಾಲುಮರದ ತಿಮ್ಮಕ್ಕನ ರೀತಿ ಸಸ್ಯಗಳನ್ನು ಮುಂದೆ ಪೂಜಿಸುತ್ತೇನೆ ಎಂದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಮಾರಂಭದಲ್ಲಿ 2019-20 ನೇ ಸಾಲಿನ ನೂತನ ಇಕೋಕ್ಲಬ್ ಸಂಘ  ಉದ್ಘಾಟಿಸಲಾಯಿತು ಮುಖ್ಯಸ್ಥರಾಗಿ ಶಾಲೆಯ ಶ್ರೀ ಪ್ರವೀಣ್ ವಿಜ್ಞಾನ ಶಿಕ್ಷಕರು ಇವರು ಇದರ ಅಧ್ಯಕ್ಷತೆ ವಹಿಸಿದರು.ಸಮಾರಂಭವನ್ನುದ್ದೇಶಿಸಿ ಮುಖ್ಯ ಶಿಕ್ಷಕರಾದ ಶ್ರೀಮತಿ ಕಮಲಮ್ಮ ರವರು ಮಾತನಾಡಿದರು ಹಾಗೂ ಶ್ರೀ ಮಲ್ಲಿಕಾರ್ಜುನ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಇದೇ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಯಾದ ಮೋಹನ್ ರವರು ಶಾಲೆಗೆ ನೇಮ್ ಬೋರ್ಡ್ ಗಳನ್ನು ದಾನವಾಗಿ ನೀಡಿದರು ಹಳೆಯ ವಿದ್ಯಾರ್ಥಿ ಸಂಘದ ಸದಸ್ಯರೆಲ್ಲರೂ ಸೇರಿ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶ್ರೀ ರಾಮು ರವರು ಅಧ್ಯಕ್ಷೀಯ ಭಾಷಣವನ್ನು ನೆರವೇರಿಸಿದರು ನಂತರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶಾಲೆಯ ಆವರಣದಲ್ಲಿ ಇಕೋ ಕ್ಲಬ್ ನ ವತಿಯಿಂದ ವಿವಿಧ ಜಾತಿಯ ಅಲಂಕಾರಿಕ ಗಿಡಗಳು ಹಾಗೂ ಔಷಧೀಯ ಗಿಡಗಳನ್ನು ನೆಡಲಾಯಿತು ನಂತರ ವಿದ್ಯಾರ್ಥಿಗಳಿಗೆ ಆದರ ಮಹತ್ವವನ್ನು ತಿಳಿಸಿ ಅದನ್ನು ಬೆಳೆಸುವ ಜವಾಬ್ದಾರಿಯನ್ನು ದತ್ತು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಸಮಾರಂಭವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು.